ಮಂಡ್ಯ[ಮಾ.29] ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.
ಜಿಲ್ಲಾಡಳಿತ ಮೇಲೆ ಅಪನಂಬಿಕೆ ಬರುವಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಐಪಿಸಿ ಸೆಕ್ಷನ್ 189ರಡಿ ನೋಟಿಸ್ ಜಾರಿ ಮಾಡಿದ ಡಿಸಿ ಮಂಜುಶ್ರೀ ಒಂದು ದಿನದೊಳಗೆ ಸಮಜಾಯಿಷಿ ಕೊಡದಿದ್ದರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.