ಮೈಸೂರು ವಿವಿ ಘಟಿಕೋತ್ಸವದಲ್ಲಿ ಕನ್ನಡದಲ್ಲಿ ಮೋದಿ ಭಾಷಣದ ಮೋಡಿ

ಪದವಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು ಎಂದು ಕನ್ನಡದ ವಾಕ್ಯ ಉಚ್ಚಾರಣೆ ಮಾಡುವ ಮಲಕ ಕನ್ನಡ ಸಾಹಿತ್ಯ ಸಂಸ್ಕ್ರತಿ ವಿಚಾರಗಳನ್ನು ಮೋದಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಮೈಸೂರಿನ ಕ್ರಾಫರ್ಡ್ ಭವನದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವರ್ಚ್ಯುವಲ್ ಭಾಷಣ ಮಾಡಿ ನರೇಂದ್ರ ಮೋದಿ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಠಿ ನಮ್ಮೆಲ್ಲರಿಗೂ ಮಾದರಿಯಾಗಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯ ಅವರ ಕನಸಿನ ಫಲ ಮೈಸೂರು ವಿಶ್ವ ವಿದ್ಯಾನಿಲಯವಾಗಿದೆ. ಗೋರೂರು ರಾಮಸ್ವಾಮಿ ಐಯ್ಯಂಗಾರ್ ಅವರ ಶಿಕ್ಷಣವೇ ಜೀವನದ ಬೆಳಕು ಎಂದು ಹೇಳಿದರು.
ಮೈಸೂರು ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ಗೆ ಕುವೆಂಪು ಅವರು ಮಾನಸ ಗಂಗೋತ್ರಿ ಎಂಬ ಹೆಸರಿಟ್ಟಿದ್ದಾರೆ. ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮಹತ್ವಪೂರ್ಣ ಅಂಶ ಎಂಬುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ನರೇಂದ್ರ ಮೋದಿ ಅವರು ಶಿಕ್ಷಣ, ಮೈಸೂರು ವಿಶ್ವ ವಿದ್ಯಾನಿಲಯದ ಇತಿಹಾಸ ಸೇರಿದಂತೆ ಹಲವು ವಿಚಾರಗಳನ್ನು ಹೇಳಿದರು.

Translate