ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ನಳಿನ್‌ ಕುಮಾರ್ ಕಟೀಲ್‌ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳೀನ್ಕುಮಾರ್ ಕಟೀಲ್ ನೇಮಕಗೊಂಡಿದ್ದಾರೆ.

ಇಂದು ಬೆಳಗ್ಗೆ ಸಚಿವ ಸಂಪುಟ ರಚನೆಯಾಗಿದ್ದು 17 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಇತ್ತು.

ಇದೀಗ ನಳೀನ್ಕುಮಾರ್ ಕಟೀಲ್ ಅವರನ್ನು ಇಂದಿನಿಂದಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಆದೇಶ ಹೊರಡಿಸಿದ್ದಾರೆ.

Translate