ಕಲ್ಬುರ್ಗಿ: ರಿಪಬ್ಲಿಕ್ ಯೂತ್ ಫೆಡರೇಶನ್ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಂವಿಧಾನ ಪಿತಾಮಹ ಬಾಬಾಸಾಹೇಬ್ ಡಾ|| ಬಿ. ಆರ್. ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರನ್ನು ಸಂಪುಟದಿಂದ ಕೈಬಿಡುವಂತೆ ಹಾಗೂ ಸಾ. ಶಿ.ಇ. ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಆಯುಕ್ತ ಜಗದೀಶ್ ಇವರನ್ನು ಸೇವೆಯಿಂದ ವಜಾಗೊಳಿಸುವಂತೆ ಮತ್ತು ರಾಷ್ಟ್ರದ್ರೋಹದಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿ ಶಿಕ್ಷೆಗೆ ಗುರಿಪಡಿಸುವ ಅಂತೆ ಆಗ್ರಹಿಸಿ ರಿಪಬ್ಲಿಕ್ ಫೆಡರೇಷನ್ ಕಲ್ಬುರ್ಗಿ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ ಮನವಿಯನ್ನು ಸಲ್ಲಿಸಿದರು.

Translate