ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗಿಳಿದ ಉಪನ್ಯಾಸಕರು

ಮೈಸೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ವಿಳಂಬ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪನ್ಯಾಸಕರು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಪ್ರತಿಭಟನೆ ನಡೆಯುತ್ತಿದ್ದು, ವೇತನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ರಾಜ್ಯ ಸರ್ಕಾರ ಉಪನ್ಯಾಸಕರ ವೇತನದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಹೊಸಹೊಸ ಸಮಸ್ಯೆಗಳನ್ನು ಸೃಷ್ಟಿಸಿ ಉಪನ್ಯಾಸ ಕರ ದಿಕ್ಕು ತಪ್ಪಿಸುತ್ತಿದೆ. ಇದುವರೆಗೂ ನೀಡಿದ ಯಾವುದೇ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಕೂಡಲೇ ಸರ್ಕಾರ ಎಚ್ಚೆತ್ತು ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಬೇಕು ಇಲ್ಲವಾದಲ್ಲಿ ಉಗ್ರಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು

Translate