ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ರಾಜೀನಾಮೆ ನೀಡಿದ ಬಳಿಕ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ಜಗದೀಶ್ ಶೆಟ್ಟರ್, ಕೆ.ಜಿ. ಬೋಪಯ್ಯ, ಸುರೇಶ್ ಕುಮಾರ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರು ಸ್ಪೀಕರ್ ಸ್ಥಾನಕ್ಕೆ ಕೇಳಿಬಂದಿದ್ದವು. ನೂತನ ಸ್ಪೀಕರ್ ಆಯ್ಕೆಗೆ ಬುಧವಾರ ಚುನಾವಣೆ ನಿಗದಿಯಾಗಿದ್ದು, ಮಂಗಳವಾರ ನಾಮಪತ್ರ ಸಲ್ಲಿಕೆಗೆ ಸೂಚನೆ ನೀಡಲಾಗಿತ್ತು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಸ್ಪೀಕರ್ ಹುದ್ದೆಗೆ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ನಾಯಕರು ಅಭಿನಂದಿಸಿದ್ದಾರೆ.

Translate