ಬೆಂಗಳೂರು: ವಿಷ್ಣು ಸ್ಮಾರಕಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ, ಮೈಸೂರು ತಾಲೂಕು ಉದ್ಬೂರು ಸಮೀಪ ಸ್ಥಳ ನಿಯುಕ್ತಿ ಮಾಡಿದ್ದ ಜಿಲ್ಲಾಡಳಿತ ಸ್ಮಾರಕ್ಕೆ ನೀಡಿದ್ದ ಭೂಮಿಗೆ ಸಂಬಂಧಪಟ್ಟಂತೆ, ಸ್ಮಾರಕ ನಿರ್ಮಾಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಕೆಳಹಂತದ ನ್ಯಾಯಾಲಯ ನೀಡಿದ ಆದೇಶವನ್ನು ರದ್ದು ಮಾಡಿ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಸರ್ಕಾರ ವಿಷ್ಣುವರ್ಧನ್ ಸ್ಮಾರಕಕ್ಕೆ ಸಂಬಂಧಪಟ್ಟಂತೆ ದಿನದಿದಂದ ದಿನಕ್ಕೆ ಕೆಲಸವನ್ನು ನಿಧಾನ ಮಾಡುತ್ತ ಬಂದಿತ್ತು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರ ಒತ್ತಾಯಕ್ಕೆ ಮಣಿದು ಸರ್ಕಾರವು ವಿಷ್ಣು ಸ್ಮಾರಕಕ್ಕೆ ಮೈಸೂರಿನ ಎಚ್.ಡಿ. ಕೋಟೆ ರಸ್ತೆಯಲ್ಲಿರುವ ಹಾಲಾಳುವಿನ ಉದ್ಬೂರು ಕ್ರಾಸ್ ಬಳಿ ಜಮೀನು ನೀಡಿತ್ತು, ಇದೇ ವೇಳೆ 2016 ರ ಡಿಸೆಂಬರ್ ೬ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷ್ಣುವರ್ಧನ್ ಸ್ಮಾರಕಕ್ಕೆ ಶಂಕುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತು, ಶಂಕುಸ್ಥಾಪನೆ ದಿವಸದ ಮುನ್ನ ದಿನ ಜಯಲಲಿತಾ ನಿಧನರಾದರು.
ಸರ್ಕಾರಿ ಕಾರ್ಯಕ್ರಮ ರದ್ದಾಯಿತು, ಅಂದು ಕೇವಲ ವಿಷ್ಣು ವರ್ಧನ್ ಕುಟುಂಬಸ್ಥರು ಆ ಜಾಗದಲ್ಲಿ ಭೂಮಿಪೂಜೆ ನಡೆಸಿದ್ದರು. ಪೂಜೆ ನಡೆಸಿದ ಬಳಿಕ ಸ್ಥಳಕ್ಕೆ ಸಂಬಂಧಪಟ್ಟಂತೆ ಕೆಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ದರು